ಕೂಡಿಗೆ, ಸೆ. 11: ಆನೆಕಾಡು ಸಮೀಪ ರಾಜಹಂಸ ಬಸ್ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರಿಗೂ ತೀವ್ರ ಗಾಯಗಳಾದ ಘಟನೆ ಇಂದು ಮುಂಜಾನೆ ನಡೆದಿದೆ. ರಾಬಿನ್, ಸಚಿನ್ ಎಂಬವರು ರಸ್ತೆಯ ಅಂಚಿನಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಮಡಿಕೇರಿ ಕಡೆಗೆ ಹೋಗುತ್ತಿದ್ದ. ರಾಜಹಂಸ ಬಸ್ (ಕೆ.ಎ. 07 ಎಫ್ 1647) ಡಿಕ್ಕಿಯಾದ ಪರಿಣಾಮ ಗಾಯಾಳುಗಳನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸ ಲಾಗಿದೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.