ಮಡಿಕೇರಿ, ಸೆ. 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾ. 13 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆಳಗಿನ ಕೊಡವ ಸಮಾಜದಲ್ಲಿ ಪೋಷಣ ಅಭಿಯಾನ ಯೋಜನೆಯಡಿ ಪೋಷಣ ಮಾಸಾಚರಣೆಯ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 9.30 ಗಂಟೆಗೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪೌಷ್ಠಿಕ ಆಹಾರಕ್ಕೆ ಸಂಬಂಧಿಸಿದಂತೆ ಜಾಥಾ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರ ಮತ್ತು ತರಕಾರಿಗಳಿಂದ ಕೆತ್ತನೆ ಸಂಬಂಧ ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಗಿದೆ. ಅತ್ಯುತ್ತಮ ಪ್ರದರ್ಶನಕ್ಕೆ ಆಕರ್ಷಕ ಬಹುಮಾನ ನೀಡಲಾಗುವದು. ಸ್ಪರ್ಧಿಸಲು ಇಚ್ಛಿಸುವವರು ತಾ. 12 ರೊಳಗೆ ಮೊಬೈಲ್ ಸಂಖ್ಯೆ: 9686280372 ಅಥವಾ 08272 298379 ರಲ್ಲಿ ಅಥವಾ ಅದೇ ದಿನ ಬೆಳಿಗ್ಗೆ 10 ಗಂಟೆಗೆ ಸ್ಫರ್ಧೆಗೆ ನಿಗದಿಪಡಿಸಿದ ಕೌಂಟರ್ಗಳಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡು ಭಾಗವಹಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.