ಶನಿವಾರಸಂತೆ, ಸೆ. 10: ಕೊಡ್ಲಿಪೇಟೆ ಪೊಲೀಸ್ ಉಪಠಾಣೆಯ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಚೆಲುವರಾಜ್ ಅವರು 30 ವರ್ಷಗಳ ಪೊಲೀಸ್ ಸೇವೆಯಿಂದ ನಿವೃತ್ತಿಗೊಂಡಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಹೆಡ್‍ಕಾನ್ಸ್‍ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಂ.ಎಸ್. ಈರಪ್ಪ ಅವರು ಮುಂಬಡ್ತಿ ಹೊಂದಿ ಶ್ರೀಮಂಗಲ ಪೊಲೀಸ್ ಠಾಣೆಗೆ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಆಗಿ ವರ್ಗಾವಣೆ ಗೊಂಡಿದ್ದು ಇವರುಗಳಿಗೆ ಗುಡುಗಳಲೆ ಆರ್.ವಿ. ಕಲ್ಯಾಣ ಮಂಟಪದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು.

ಸಮಾರಂಭದ ಅಧ್ಯಕ್ಷತೆಯನ್ನು ಡಿ.ವೈ.ಎಸ್.ಪಿ. ಪಿ.ಕೆ. ಮುರುಳಿಧರ್ ವಹಿಸಿದ್ದರು. ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಎಂ.ಹೆಚ್. ಮರಿಸ್ವಾಮಿ, ಸಬ್ ಇನ್ಸ್‍ಪೆಕ್ಟರ್ ಸದಾಶಿವಯ್ಯ, ಶನಿವಾರಸಂತೆ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗಳಾದ ಶಿವಲಿಂಗ, ಹೆಚ್. ಎಂ. ಗೋವಿಂದ್, ಶನಿವಾರಸಂತೆ, ಕೊಡ್ಲಿಪೇಟೆಯ ಪೊಲೀಸರು, ಕುಟುಂಬದವರು ಉಪಸ್ಥಿತರಿದ್ದರು.