ನಾಪೋಕ್ಲು, ಸೆ. 10 : ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ಪೇರೂರು ಗ್ರಾಮದ ಮಂಜೋಟ್ ಕಾಲೋನಿ ನಿವಾಸಿಗಳು ರಸ್ತೆ ದುರಸ್ತಿಪಡಿಸುವಂತೆ ಮನವಿ ಮಾಡಿದ ಕಾರಣ ಸ್ಥಳಕ್ಕೆ ಭೇಟಿ ಮಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಹಾಗೂ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ ಪರಿಶೀಲಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಚಂಗೇಟಿರ ಕುಮಾರ್ ಸೋಮಣ್ಣ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮತ್ತಿತರರಿದ್ದರು.