*ಸಿದ್ದಾಪುರ, ಸೆ. 10: ಅಭ್ಯತ್‍ಮಂಗಲ ಗ್ರಾಮದಲ್ಲಿ ನೂತನ ವಿದ್ಯುತ್ ಪರಿವರ್ತಕವನ್ನು ಅಳವಡಿಸಿದ್ದು ಗ್ರಾಮ ಪಂಚಾಯಿತಿ ಸದಸ್ಯ ಅಂಚೆಮನೆ ಸುಧಿಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಚೆಸ್ಕಾಂ ಸಹಾಯಕ ಅಭಿಯಂತರ ದಿನೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ನಳಿನಿ, ಜನಾರ್ಧನ್ ಹಾಗೂ ಗ್ರಾಮಸ್ಥರು ಹಾಜರಿದ್ದರು. ಗ್ರಾಮದಲ್ಲಿ ಅನೇಕ ದಿನಗಳಿಂದ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು ಸ್ಥಳೀಯ ಗ್ರಾಮಸ್ಥರು ಮತ್ತು ಕೃಷಿಕರು ವಿದ್ಯುತ್ ಪರಿವರ್ತಕ ಅಳವಡಿಸಲು ಒತ್ತಾಯ ಹೇರಿದ್ದರು.