ವೀರಾಜಪೇಟೆ, ಸೆ. 10: ವೀರಾಜಪೇಟೆ ಕೊಡವ ಸಮಾಜ ವತಿಯಿಂದ ತಾ.15 ರಂದು ಕೈಲ್‍ಮುಹೂರ್ತ ಕ್ರೀಡಾಕೂಟವನ್ನು ಸಮಾಜದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ವಾಂಚೀರ ನಾಣಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಣಯ್ಯ ಅವರು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗೆ ಬೆಳ್ಳಿಯ ರೋಲಿಂಗ್ ಟ್ರೋಫಿಯನ್ನು ನೀಡಲಾಗುವದು. ಪುರುಷರು ಹಾಗೂ ಮಹಿಳೆಯರಿಗೆ ಭಾರದ ಗುಂಡು ಎಸೆತ, ವಾಲಗದ ಕುಣಿತ ಸೇರಿದಂತೆ ಹಲವಾರು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಕುಯಿಮಂಡ ಕಿರಣ್, ಕಾರ್ಯದರ್ಶಿ ಕುಲ್ಲಚಂಡ ಪೂಣಚ್ಚ ಉಪಸ್ಥಿತರಿದ್ದರು.