ಮಡಿಕೇರಿ, ಸೆ. 10: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೆರಾಜೆ ಜ್ಯೋತಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ 2019-20ನೇ ಸಾಲಿನ ಕ್ರೀಡಾಕೂಟ ತಾ. 12 ರಿಂದ 14 ರವರೆಗೆ ಪೆರಾಜೆ ಜ್ಯೋತಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ತಾ. 12 ರಂದು ಬೆಳಗ್ಗೆ 9.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಎಂ.ಪಿ. ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿ.ಪಂ. ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ಪೆರಾಜೆ ಜ್ಯೋತಿ ವಿದ್ಯಾಸಂಘದ ಅಧ್ಯಕ್ಷ ಡಾ. ಎನ್.ಎ. ಜ್ಞಾನೇಶ್, ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಧರಣೀಧರ, ಸಂಸದ ಪ್ರತಾಪ್ ಸಿಂಹ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಭಾಗಮಂಡಲ ಕ್ಷೇತ್ರ ಜಿ.ಪಂ ಸದಸೆÀ್ಯ ಕವಿತಾ ಪ್ರಭಾಕರ್, ತಾ.ಪಂ. ಅಧ್ಯಕೆÀ್ಷ ತೆಕ್ಕಡೆ ಶೋಭಾ ಮೋಹನ್, ತಾ.ಪಂ. ಉಪಾಧ್ಯಕ್ಷರಾದ ಬೊಳಿಯಾಡಿರ ಸಂತು ಸುಬ್ರಮಣಿ, ಸದಸ್ಯರಾದ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಎನ್.ಬಿ. ನಂಜಪ್ಪ, ಸದಸ್ಯ ಪ್ರಕಾಶ್ ದೊಡ್ಡಡ್ಕ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಪೆರಾಜೆ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಬಿ. ವಿಶ್ವನಾಥ್, ಮಡಿಕೇರಿ ತಾಲೂಕು ತಹಶೀಲ್ದಾರ್ ಟಿ.ಎಸ್. ಮಹೇಶ್, ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಮಚ್ಚಾಡೋ, ಡಯಟ್ ಕೂಡಿಗೆ ಪ್ರಾಂಶುಪಾಲರು ಹಾಗೂ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ, ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು, ಕಾಶಿನಾಥ್, ತಾ.ಪಂ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮೋಹನ್, ದೈಹಿಕ ಶಿಕ್ಷಣಾಧಿಕಾರಿ ಎಸ್.ಟಿ. ವೆಂಕಟೇಶ್, ಕ.ರಾ.ಸ. ನೌಕರರ ಸಂಘದ ಅಧ್ಯಕ್ಷ ಕೆ.ಬಿ. ರವಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ತಮ್ಮಯ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ. ಪೂರ್ಣೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಕೆ. ಮೆಹಬೂಬ್ ಸಾಬ್, ಕ.ರಾ.ಪ್ರಾ.ಶಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಅನುದಾನಿತ ಪ್ರೌಢಶಾಲಾ ನೌಕರರ ಸಂಘದ ಅಧ್ಯಕ್ಷ ವಿಲ್‍ಫ್ರೆಡ್ ಕ್ರಾಸ್ತಾ ಅವರು ಪಾಲ್ಗೊಳ್ಳಲಿದ್ದಾರೆ.