ಮಡಿಕೇರಿ, ಸೆ. 10 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಾಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ತಾ.12ರಂದು ಕಾಲೇಜಿನ ವಿದ್ಯಾಥಿಗಳಿಗೆ ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ನಡೆದ ಮಾಸಿಕ ಸಭೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಆಯೋಜಿಸುವಂತೆ ತೀರ್ಮಾನಿಸ ಲಾಯಿತು.

ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರತ್ಯೇಕವಾಗಿ ‘ಕೊಡಗಿನ ಪ್ರವಾಸೋದ್ಯಮದ ಮೇಲೆ ಪ್ರಾಕೃತಿಕ ವಿಕೋಪದ ಪರಿಣಾಮ’ ಎಂಬ ವಿಷಯದ ಬಗ್ಗೆ ಪ್ರತ್ಯೇಕವಾಗಿ ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ತಾ.12ರಂದು ಬೆಳಗ್ಗೆ 10.30ಕ್ಕೆ ನಡೆಸುವಂತೆ ನಿರ್ಧರಿಸಲಾಯಿತು. ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಂದೇ ಪ್ರಶಸ್ತಿ ವಿತರಣೆ ಮಾಡುವಂತೆ ತೀರ್ಮಾನಿಸಲಾಯಿತು. ತಾ.14ರಂದು ಮಧ್ಯಾಹ್ನ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಾಡುವಂತೆ ನಿರ್ಧರಿಸಲಾಯಿತು.

ಹಳೆ ವಿದ್ಯಾರ್ಥಿಗಳ ಸಂಘದಿಂದ ಮುಂದಿನ ದಿನಗಳಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸು ವಂತೆ ರೂಪುರೇಷೆ ಹಾಕಲಾಯಿತು.

ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ಉಪಾಧ್ಯಕ್ಷ ಚರ್ಮಣ್ಣ, ನಿರ್ದೇಶಕರಾದ ಎನ್.ಎ. ಅಪ್ಪಯ್ಯ, ಕಾವೇರಿ ನಂಜಪ್ಪ, ಬೋಜಮ್ಮ, ತಾರ ಮುದ್ದಯ್ಯ, ರಾಣಿ ಮಾಚಯ್ಯ, ಶ್ಯಾಮ್ ಪೂಣಚ್ಚ, ವಿಘ್ನೇಶ್ ಎಂ. ಭೂತನಕಾಡು, ಕಿಶೋರ್ ರೈ ಕತ್ತಲೆಕಾಡು ಹಾಜರಿದ್ದರು.