ಮಡಿಕೇರಿ, ಸೆ. 10: ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಯನ್ನು ಜಿಲ್ಲಾ ಮಟ್ಟದಲ್ಲಿ ಆಚರಿಸುವ ಪ್ರಯುಕ್ತ ಹಿರಿಯ ನಾಗರಿಕರಿಗಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆ ಆಯೋಜಿಸುವ ಸಂಬಂಧ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಾ. 16 ರಂದು ಮಧ್ಯಾಹ್ನ 2.30 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಸಭೆ ನಡೆಯಲಿದೆ.
ಇದಕ್ಕೆ ಸಂಬಂಧಿಸಿದಂತೆ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸು ತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಸಭೆಗೆ ಹಾಜರಾಗುವ ಮೂಲಕ ಸಲಹೆ ಸಹಕಾರ ನೀಡುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್. ಸಂಪತ್‍ಕುಮಾರ್ ಕೋರಿದ್ದಾರೆ.