ಪೆರಾಜೆ, ಸೆ. 10: ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ ಕೊಡಗು, ಪೆರಾಜೆ ಜ್ಯೋತಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ಕ್ರೀಡಾಕೂಟ ಪೆರಾಜೆ ಜ್ಯೋತಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ತಾ.12ರಿಂದ 14ರ ವರೆಗೆ ನಡೆಯಲಿದೆ.
ತಾ.12ರಂದು ಉದ್ಘಾಟನೆಗೊಳ್ಳಲಿದ್ದು, ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ವಹಿಸಲಿದ್ದಾರೆ. ಧ್ವಜಾರೋಹಣವನ್ನು ಜಿ.ಪಂ.ಅಧ್ಯಕ್ಷ ಹರೀಶ್ ನೆರವೇರಿಸಲಿದ್ದಾರೆ. ಗೌರವ ವಂದನೆಯನ್ನು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷ ಎನ್.ಎ.ಜ್ಞಾನೇಶ್, ಕ್ರೀಡಾಜ್ಯೋತಿ ಪ್ರಜ್ವಲನೆಯನ್ನು ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿ ಧರಣೇಧರ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರು, ಜಿ.ಪಂ., ತಾ.ಪಂ., ಗ್ರಾ.ಪಂ. ಸದಸ್ಯರು ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮಡಿಕೇರಿ ತಹಶೀಲ್ದಾರ್ ಮಹೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ.ಪಿ. ಭಾಗವಹಿಸಲಿದ್ದಾರೆ ಎಂದು ಪೆರಾಜೆ ಜ್ಯೋತಿ ಪ್ರೌಢಶಾಲಾ ಮುಖ್ಯಶಿಕ್ಷಕ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.