ಮಡಿಕೇರಿ, ಸೆ. 11: ಮೈಸೂರಿನ ಫ್ರೀಕರ್ಸ್ ಡ್ಯಾನ್ಸ್ ಅಕಾಡೆಮಿ ನಡೆಸಿದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯ ಸೀಸನ್ 4ನೇ ಆವೃತ್ತಿಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದುಕೊಂಡಿದೆ.
ಮೈಸೂರಿನ ಜಗನ್ಮೋಹನ ಪ್ಯಾಲೇಸ್‍ನಲ್ಲಿ ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳ ತಂಡಗಳು ಭಾಗವಹಿಸಿದ್ದು, ಕಿಂಗ್ಸ್ ತಂಡ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕಿಂಗ್ಸ್‍ನ ನೃತ್ಯ ಸಂಯೋಜಕ ಮಹೇಶ್ ಮಾರ್ಗದರ್ಶನದಲ್ಲಿ ತಂಡದ ಕಲಾವಿದರು ನೃತ್ಯ ಪ್ರದರ್ಶನ ಮಾಡಿದರು.