ಮಡಿಕೇರಿ, ಸೆ. 10: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರುಗಳು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮಾಲೋಚನೆ-ಚಿಂತನ ಮಂಥನ ಸಭೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಳಗಾವಿಯ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಟಿ. ಕಿರಣ್ ಕಾರ್ಯಪ್ಪ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕೆÀ್ಷ ಸರೋಜಮ್ಮ ಭಾಗವಹಿಸಿದ್ದರು.