ಸೋಮವಾರಪೇಟೆ, ಸೆ. 10: ತಾಲೂಕಿನ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿ.ಐ.ಟಿ.ಯು.) ಸಂಘಟನೆಯ ಪ್ರಥಮ ಸಮ್ಮೇಳನ, 50ನೇ ವರ್ಷಾಚರಣೆ ಹಾಗೂ ಕಾರ್ಮಿಕ ಚಳುವಳಿಯ ಶತಮಾನೋತ್ಸವ ಕಾರ್ಯಕ್ರಮ ಇಲ್ಲಿನ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿ.ಐ.ಟಿ.ಯು. ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಧರ್ಮೇಶ್ ಮಾತನಾಡಿ, ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯ ಭಾಗವಾಗಿ ಇಂದು ಲಕ್ಷಾಂತರ ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಕಾರ್ಖಾನೆಗಳು ಮುಚ್ಚಲ್ಪಟ್ಟಿವೆ. ಬಿ.ಎಸ್.ಎನ್.ಎಲ್. ನಂತಹ ಸಂಸ್ಥೆಗಳು ದಿವಾಳಿಯತ್ತ ಸಾಗಿವೆ ಎಂದು ದೂರಿದರು. ಗ್ರಾ.ಪಂ. ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ನೂರಾರು ವರ್ಷಗಳ ಹೋರಾಟದಿಂದ ಪಡೆದುಕೊಂಡ ಕಾರ್ಮಿಕ ಕಾನೂನುಗಳನ್ನು ಬದಲಾಯಿಸಿ ಕಾರ್ಮಿಕರಿಗೆ ಕೇಂದ್ರ ಸರಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಮುಖಂಡರಾದ ಎನ್.ಡಿ. ಕುಟ್ಟಪ್ಪನ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ರಮೇಶ್, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎ.ಸಿ. ಸಾಬು ಇದ್ದರು.