ಸೋಮವಾರಪೇಟೆ, ಸೆ. 12: ಚೈಲ್ಡ್‍ಲೈನ್ ಸಂಸ್ಥೆಯ ವತಿಯಿಂದ ಸಮೀಪದ ಮಾಲಂಬಿ ಆಶ್ರಮ ಶಾಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರ ನಡೆಯಿತು. ಚೈಲ್ಡ್‍ಲೈನ್ ಸಂಸ್ಥೆಯ ಕಾರ್ಯಕರ್ತೆ ಕುಸುಮ ಅವರು ಮಾತನಾಡಿ, ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರಲ್ಲದೇ, ಕಾಯ್ದೆಯ ಬಗ್ಗೆ ಸವಿಸ್ತಾರ ಮಾಹಿತಿ ಒದಗಿಸಿದರು. ಈ ಸಂದರ್ಭ ಸಂಸ್ಥೆಯ ಕಾರ್ಯಕರ್ತರಾದ ಪ್ರವೀಣ್‍ಕುಮಾರ್, ಮಾಲಂಬಿ ಶಾಲಾ ಮುಖ್ಯಶಿಕ್ಷಕ ಹೆಚ್.ಎಲ್. ರವಿ ಸೇರಿದಂತೆ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.