ಕೂಡಿಗೆ, ಸೆ. 12: ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆಯಡಿ ತೊರೆನೂರು ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಉತ್ಸವ ಸಾಂಸ್ಕøತಿಕ ಕಾರ್ಯಕ್ರಮ ತೆರೆಕಂಡಿತು.
ಸಮಾರೋಪ ಸಮಾರಂಭದಲ್ಲಿ ಸಂಗೀತ ದಿಗ್ಗಜ, ಪ್ರಶಸ್ತಿ ಪುರಸ್ಕøತ ಡಾ. ರಾಘವೇಂದ್ರ ಅವರ ತಂಡದ ಗೀತಗಾಯನ, ಪ್ರಿಯಾ ಲೋಕೇಶ್ ತಂಡದ ನೃತ್ಯ ವೈಭವ ಹಾಗೂ ಮೈಸೂರಿನ ಆನಂದ್ ಅವರ ಹಾಸ್ಯ ಚಟಾಕಿ, ಗಿರೀಶ್ ಅವರ ಗೀಗಿಪದ, ಜನಪದ ಗೀತೆ, ರಂಗಗೀತೆಗಳು ಜನಮನ ಸೂರೆಗೊಂಡವು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೃಷ್ಣೇಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಟಿ.ಕೆ. ಪಾಂಡುರಂಗ ಪಾಲ್ಗೊಂಡಿದ್ದರು.
ಈ ಸಂದರ್ಭ ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿ ಮಣಜೂರು ಮಂಜುನಾಥ್, ದೇವಾಲಯ ಸಮಿತಿಯ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ಕುಶಾಲನಗರ ಎಪಿಸಿಎಂಎಸ್ ನಿರ್ದೇಶಕ ಟಿ.ಬಿ. ಜಗದೀಶ್, ಗ್ರಾ.ಪಂ. ಸದಸ್ಯ ಮಹೇಶ್, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕುಶಾಲಪ್ಪ, ಟಿ.ಪಿ. ಪ್ರಸನ್ನ, ಟಿ.ಜೆ. ಶ್ರೀನಿವಾಸ್ ಸೇರಿದಂತೆ ಮತ್ತಿತರರು ಇದ್ದರು.