ಪೆರಾಜೆ, ಸೆ. 12: ಇಲ್ಲಿಯ ಶ್ರೀ ಶಾಸ್ತಾವು ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 39 ವರ್ಷಗಳ ಕಾಲ ಉಳ್ಳಕುಳ ಪೂಜಾರಿಯಾಗಿ ಸೇವೆ ಸಲ್ಲಿಸಿದ ಜತ್ತನ ಕೃಷ್ಣಪ್ಪ, ಸುಮಾರು 45 ವರ್ಷಗಳ ಕಾಲ ದೀಟಿಕೆ ಪೂಜಾರಿಯಾಗಿ ಸೇವೆ ಸಲ್ಲಿಸಿದ ಚಿನ್ನಪ್ಪ ಕಾಸ್ಪಾಡಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ದೇವಾಲಯದ ಆಡಳಿತ ಮೊಕ್ತೇಸರಾದ ಕುಂಬಳಚೇರಿ ವಿಶ್ವನಾಥ, ಮಡಿಕೇರಿ ತಾಲೂಕು ಪಂಚಾಯಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ, ಕಾರ್ಯದರ್ಶಿ ಹೊನ್ನಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ನವೀಕರಣ ಬ್ರಹ್ಮಕಲಶೋತ್ಸವದ ಪ್ರಧಾನ ಕಾರ್ಯದರ್ಶಿ ನಿಡ್ಯಮಲೆ ಜಿತೇಂದ್ರ, ದೇವತಕ್ಕರಾದ ರಾಜಗೋಪಾಲ ರಾಮಕಜೆ ಸೇರಿದಂತೆ ಊರಿನ ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಇದ್ದರು.
- ಕಿರಣ್ ಕುಂಬಳಚೇರಿ