ಕೂಡಿಗೆ, ಸೆ. 12: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಹಾಗೂ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸುವ ಸಾರ್ವಜನಿಕ ಸಂಪರ್ಕ ಸಭೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿ ಪೂಣಚ್ಚ ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದÀರ್ಭದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಿವಾನಂದ, ಜಗದೀಶ್, ಗೊಂದಿ ಬಸವನಹಳ್ಳಿಯ ರೋಡೆಕೆರೆ ಒತ್ತುವರಿ ಬಗ್ಗೆ, ಕಲ್ಲು ಗಣಿಗಾರಿಕೆಯ ಬಗ್ಗೆ, ಅರಣ್ಯ ಇಲಾಖೆಯವರು ಅನಾವಶ್ಯಕ ವಾಗಿ ಗ್ರಾಮಸ್ಥರಿಗೆ ತೊಂದರೆ ನೀಡುವ ಬಗ್ಗೆ ಹಾಗೂ 5/1ಪಿ2ರ ಸರ್ವೆ ನಂಬರ್ ಜಾಗ ಒತ್ತುವರಿಯಾಗಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದರು.
ಲೋಕಾಯುಕ್ತ ಅಧಿಕಾರಿ ಪೂಣಚ್ಚ ಮಾತಾನಾಡಿ, ಅಹವಾಲನ್ನು ನಮ್ಮ ಇಲಾಖೆಯ ಮೂಲಕ ಸಂಬಂಧಿಸಿದ ಇಲಾಖೆಗೆ ಕಳುಹಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವದು ಎಂದು ತಿಳಿಸಿದರು. ತಾಲೂಕು ತಹಶೀಲ್ದಾರ್ ಗೋಂವಿಂದರಾಜ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್. ರಾಜಶೇಖರ, ಉಪ ತಹಶೀಲ್ದಾರ್ ಚಿಣ್ಣಪ್ಪ, ಕುಶಾಲನಗರ ಕಂದಾಯ ಇಲಾಖೆಯ ನಿರೀಕ್ಷಕ ಮಧುಕುಮಾರ್ ಸೇರಿದಂತೆ ಕುಶಾಲನಗರ ಉಪ ನೋಂದಣಿ ಅಧಿಕಾರಿ, ತೋಟಗಾರಿಕೆ ಇಲಾಖೆ ಅಧಿಕಾರಿ, ಅರಣ್ಯ ಇಲಾಖೆಯ ವಿವಿಧ ಭಾಗಗಳ ಅಧಿಕಾರಿಗಳು, ಕುಶಾಲನಗರ ಮತ್ತು ಸುಂಟಿಕೂಪ್ಪ ವ್ಯಾಪ್ತಿಯ ಗ್ರಾಮ ಲೆಕ್ಕಿಗರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.