ಶನಿವಾರಸಂತೆ, ಸೆ. 12: ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವದರಿಂದ ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಸಹೋದರತ್ವ ಭಾವನೆಗಳು ಮೂಡುವದರ ಜೊತೆಗೆ ಮಾನವೀಯ ಮೌಲ್ಯಗಳ ಅರಿವೂ ಆಗುತ್ತದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ಅಭಿಪ್ರಾಯಪಟ್ಟರು.

ಸಮೀಪದ ಆಲೂರು-ಸಿದ್ದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ, ಮಾಜಿ ಸದಸ್ಯ ಡಿ.ಬಿ. ಧರ್ಮಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಪಿ.ಡಿ.ಓ. ಪೂರ್ಣಿಮಾ, ಸಂಪನ್ಮೂಲ ವ್ಯಕ್ತಿ ಚಿಣ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಇಲಾಖೆ ಅಧಿಕಾರಿ ಹೆಚ್.ಎ. ವೆಂಕಟೇಶ್, ತಾಲೂಕು ಪರಿವೀಕ್ಷಕ ಪರಮೇಶ್ವರಪ್ಪ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ, ಪ್ರಾಂಶುಪಾಲರು, ಶಿಕ್ಷಕರು ಹಾಜರಿದ್ದರು.