ಸೋಮವಾರಪೇಟೆ, ಸೆ. 13: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ತಾಲೂಕು ಒಕ್ಕಲಿಗರ ಸಂಘದ ಬಿ.ಟಿ.ಸಿ.ಜಿ. ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕುವೆಂಪು ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಒಕ್ಕಲಿಗರ ನಂತರ ಮಾತನಾಡಿದ ಅವರು, ಕ್ರೀಡೆ ವಿದ್ಯಾರ್ಥಿಗಳ ಮಾನಸಿಕ ಹಾಗು ದೈಹಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾಭ್ಯಾಸದಲ್ಲೂ ಏಕಾಗ್ರತೆ ಬೆಳೆಯಲಿದೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ನಾನಾ ಕ್ಷೇತ್ರಗಳಲ್ಲಿ ಹೆಚ್ಚು ಅವಕಾಶಗಳು ಸಿಗಲಿವೆ ಎಂದು ಹೇಳಿದರು.
ಸಮಾರಂಭದಲ್ಲಿ ಎಸ್.ಆರ್.ಇ.ಡಿ. ಟ್ರಸ್ಟ್ ಅಧ್ಯಕ್ಷ ಎಚ್.ಆರ್.ಸುರೇಶ್, ಕುವೆಂಪು ಶಾಲೆಯ ಮುಖ್ಯ ಶಿಕ್ಷಕಿ ಮಿಲ್ಡ್ರೆಡ್ ಗೋನ್ಸಾಲ್ವೆಸ್, ಕಾಲೇಜಿನ ಪ್ರಾಂಶುಪಾಲ ಎಚ್.ಎಸ್.ಶರಣ್, ಶನಿವಾರಸಂತೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಕೆ.ಅಶೋಕ್, ಕೊಡ್ಲಿಪೇಟೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಂಗಸ್ವಾಮಿ ಉಪಸ್ಥಿತರಿದ್ದರು.