ಸೋಮವಾರಪೇಟೆ, ಸೆ.13: ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಉತ್ತೀರ್ಣರಾದ ಕೊಡಗು ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾಘಟದ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ ತಿಳಿಸಿದ್ದಾರೆ.
2017-18 ಹಾಗೂ 2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಯಲ್ಲಿ ಶೇ. 80% ಕ್ಕಿಂತ ಹೆಚ್ಚಿನ ಅಂಕಗಳಿಸಿದ ಜಿಲ್ಲೆಯ ವೀರಶೈವ ಲಿಂಗಾಯತ ವಿದ್ಯಾರ್ಥಿ ಗಳು ತಮ್ಮ ಅರ್ಜಿಯೊಂದಿಗೆ ದೃಢೀಕರಿಸಿದ ಅಂಕಪಟ್ಟಿಯ ನಕಲು, ಜಾತಿ ದೃಢೀಕರಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ತಾ. 30ರೊಳಗೆ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ನಂ. 541, 4ನೇ ವಿಭಾಗ, ಶಿವರಾಮ ಕಾರಂತ ಬಡಾವಣೆ, ಕುಶಾಲನಗರ 571234 ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಮೊ: 9480083327, 9448336781, ಸಂಖ್ಯೆಗಳನ್ನು ಸಂಪರ್ಕಿಸಬಹು ದಾಗಿದೆ.