ಒಡೆಯನಪುರ, ಸೆ. 14: ಶ್ರೀ ಗಣಪತಿ ಸೇವಾ ಸಮಿತಿ ವತಿಯಿಂದ ಗ್ರಾಮದ ಸಮುದಾಯ ಭವನದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನೆರವೇರಿತು.
ವಿಶೇಷ ಪೂಜೆಯನ್ನು ನೆರವೇರಿಸಿ ಅಲಂಕರಿಸಿದ ವಾಹನದಲ್ಲಿ ಗೌರಿ-ಗಣೇಶ ಮೂರ್ತಿಯನ್ನು ಕೂರಿಸಿ ಮಂಗಳ ವಾದ್ಯಗೋಷ್ಠಿಯೊಂದಿಗೆ ಗ್ರಾಮದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಯುವಕ, ಯುವತಿಯರು, ಮಕ್ಕಳು, ವಿವಿಧ ಜನಾಂಗದ ಬಾಂಧವರು ಬೇದಭಾವ ಮರೆತು ಸಂಭ್ರಮದಿಂದ ಪಾಲ್ಗೊಂಡಿದ್ದರು.
ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಪಟ್ಟರು. ಶನಿವಾರಸಂತೆ ಹೊಳೆಯಲ್ಲಿ ವಿಸರ್ಜನೆ ಮಾಡಲಾಯಿತು.