ಸೋಮವಾರಪೇಟೆ, ಸೆ. 13: ಸಮೀಪದ ಐಗೂರು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಸಭೆ ತಾ.16 ರಂದು ಪೂರ್ವಾಹ್ನ 10.30ಕ್ಕೆ ಪಂಚಾಯಿತಿ ಅಧ್ಯಕ್ಷ ಡಿ.ಎಂ. ರಮೇಶ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.
ಸಂಪನ್ಮೂಲ ಅಧಿಕಾರಿಯಾಗಿ ಸಿಆರ್‍ಪಿ ಶಶಿಧರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಪಂಚಾಯಿತಿ ಸದಸ್ಯೆ ಸಬಿತ ಚನ್ನಕೇಶವ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.