ಮಡಿಕೇರಿ, ಸೆ.14: ಪ್ರಸಕ್ತ (2019-20) ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಮೂರು ತಾಲೂಕು ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಾ. 16 ರಂದು ಪೊನ್ನಂಪೇಟೆ ತಾಲೂಕು ಮಿನಿ ಕ್ರೀಡಾಂಗಣ, ತಾ. 17 ರಂದು ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನ, ತಾ. 18 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಹಾಗೂ ತಾ. 20 ರಂದು ಕೊಡಗು ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ಅವರು ತಿಳಿಸಿದ್ದಾರೆ.