ಮಡಿಕೇರಿ, ಸೆ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ.16 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್, ಸಿದ್ದಾಪುರ ಎಸ್‍ಎನ್‍ಡಿಪಿ. ಯೂನಿಯನ್ ಸಂಚಾಲಕ ಕೆ.ಎನ್. ವಾಸು, ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ.ವೈ. ಆನಂದರಘು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ ಇತರರು ಪಾಲ್ಗೊಳ್ಳಲಿದ್ದಾರೆ.