ವೀರಾಜಪೇಟೆ, ಸೆ. 13: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ರಾಜ್ಯಮಟ್ಟದಲ್ಲಿ ನೀಡುವ ಪ್ರಶಸ್ತಿ ಆಯ್ಕೆಗಾಗಿ ನಡೆದ ಶಿಬಿರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವೀರಾಜಪೇಟೆಯ ಅಂತಿಮ ಬಿ.ಕಾಂ. ವಿದ್ಯಾರ್ಥಿ ಅಲ್ಲಂಗಡ ಪಿ. ತಮ್ಮಯ್ಯ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದರು.ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 176 ರೋವರ್ಸ್ ಪಾಲ್ಗೊಂಡಿದ್ದ ಈ ಶಿಬಿರದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ ಪ್ರಥಮ ರೋವರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.