ಶನಿವಾರಸಂತೆ, ಸೆ. 14: ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 17 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಎಸ್.ಡಿ. ತಮ್ಮಯ್ಯ ಅಧ್ಯಕ್ಷತೆಯಲ್ಲಿ ಕೊಡ್ಲಿಪೇಟೆ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಡಿ. ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.