ಚೆಟ್ಟಳ್ಳಿ: ವೀರಾಜಪೇಟೆ ತಾಲೂಕಿನ ದೇವಣಗೇರಿ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಕಲಿಕಾ ಕೊಠಡಿಯನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೋಂಡ ಶಶಿ ಸುಬ್ರಮಣಿ ಉದ್ಘಾಟಿಸಿದರು
ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಕಲಿಕಾ ಕೊಠಡಿಯನ್ನು ಪ್ರಾರಂಭ ಮಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಮುಂದೆ ತರುವ ಪ್ರಯತ್ನಕ್ಕೆ ಶಿಕ್ಷಕರು ಮುಂದಾಗಿರುವದು ಅಭಿನಂದನಾರ್ಹವಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಮಾತನಾಡಿ, ಸರ್ಕಾರಿ ಶಾಲೆಯಗಳಲ್ಲಿ ಇಂಗ್ಲಿಷ್ ಪ್ರಾರಂಭ ಮಾಡಲಾಗಿದೆ. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುಷಾ ಹಾಗೂ ಶಿಕ್ಷಕರುಗಳ ಪ್ರಯತ್ನದಿಂದ ಶಾಲೆಯಲ್ಲಿ ಇಂಗ್ಲಿಷ್ ಕಲಿಕಾ ಕೊಠಡಿಯನ್ನು ಪ್ರಾರಂಭ ಮಾಡಿದ್ದಾರೆ ಎಂದರು.
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುಷಾ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಇಂಗ್ಲಿಷ್ ಕಲಿಕಾ ಕೊಠಡಿಯನ್ನು ಪ್ರಾರಂಭ ಮಾಡಲಾಗಿದೆ. ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗಿರುವ ಅಂಶಗಳನ್ನು ಕಲಿಯಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು. ಶಾಲಾ ಶಿಕ್ಷಕಿ ಉಷಾ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ರಷೀದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞ ಪೂಣಚ್ಚ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಯಲ್ಲಪ್ಪ ಪೂಜಾರಿ, ಗೀತಾಂಜಲಿ, ಜೈಸಿ ಜೋಸೆಫ್, ವಿಶೇಷ ವಿದ್ಯಾರ್ಥಿಗಳ ತಾಲೂಕು ಮೇಲ್ವಿಚಾರಕಿ ಅಜಿತಾ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ವೆಂಕಟೇಶ್, ಶ್ರೀನಿವಾಸ್, ಕರಂಬಯ್ಯ, ಕ್ಲಸ್ಟರ್‍ನ ಶಾಲಾ ಮುಖ್ಯ ಶಿಕ್ಷಕರುಗಳಾದ ಲೋಕೇಶ್, ಮಹೇಂದ್ರ, ಕವಿತಾ ಶೆಟ್ಟಿ , ಪ್ರಮೀಳಾ, ಸುಮತಿ ಸೇರಿದಂತೆ ಪೋಷಕರು ಹಾಜರಿದ್ದರು.