ಸೋಮವಾರಪೇಟೆ, ಸೆ. 15: ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೂಡಿಗೆ ಇವರ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಡಯಟ್ ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ವಿತರಣೆ ಸಂದರ್ಭ ಡಯಟ್ ಪ್ರಾಂಶುಪಾಲ ಜವರೇಗೌಡ, ಕಾರ್ಯಕ್ರಮ ಸಂಯೋಜಕ ಎ.ಪಿ. ಕುಮಾರ್, ಡಯಟ್ ಹಿರಿಯ ಉಪನ್ಯಾಸಕರು ಹಾಗೂ ತೀರ್ಪುಗಾರರು ಉಪಸ್ಥಿತರಿದ್ದರು.