ಮಡಿಕೇರಿ, ಸೆ. 15: ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್. ಲಕ್ಷ್ಮೀಕಾಂತ್ ಅವರನ್ನು ಗದಗ ಸಾಮಾಜಿಕ ಅರಣ್ಯ ವಲಯ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಕುಶಾಲನಗರ ವಲಯದ ಅರಣ್ಯಾಧಿಕಾರಿ ಸಿ.ಆರ್. ಅರುಣ್ ಅವರನ್ನು ಕೆಎಫ್ಡಿಸಿಗೆ, ಭಾಗಮಂಡಲ ವಲಯ ಅರಣ್ಯಾಧಿಕಾರಿ ಎಂ.ಎಸ್. ಚೆಂಗಪ್ಪ ಅವರನ್ನು ಮಡಿಕೇರಿ ಸರ್ವೆ ವಿಭಾಗಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.