ಸೋಮವಾರಪೇಟೆ,ಸೆ.15 : ಇಲ್ಲಿನ ಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 165ನೇ ಜನ್ಮದಿನಾಚರಣೆ ಪ್ರಯುಕ್ತ ಸಮಿತಿ ಸಭಾಂಗಣದಲ್ಲಿ ವಿಶೇಷ ಪೂಜೆ ನಡೆಯಿತು. ವಾಸು ಪೂಜಾರಿಯವರ ಪೌರೋಹಿತ್ಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬಿ.ಎ. ಭಾಸ್ಕರ್, ಪ್ರಧಾನ ಕಾರ್ಯದರ್ಶಿ ಇಂದಿರಾ ರಮೇಶ್, ಖಜಾಂಚಿ ಎಂ.ಜಿ. ರಮೇಶ್, ಸಮಿತಿ ನಿರ್ದೇಶಕರುಗಳು ಹಾಗೂ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು.