ಮಡಿಕೇರಿ, ಸೆ.15: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ರಾಷ್ಟ್ರ ಮಟ್ಟದ ಸಕ್ಷಮ-2019 ರ ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ತಿತಿತಿ.ಠಿಛಿಡಿಚಿಛಿomಠಿeಣiಣioಟಿs.oಡಿg ಎಂಬ ಪೋರ್ಟಲ್ ಅನ್ನು ವಿನ್ಯಾಸಗೊಳಿಸಿದ್ದು, ಈ ಪೋರ್ಟಲ್ ನಲ್ಲಿ ಸ್ಪರ್ಧೆಗೆ ಸಂಬಂಧಿಸಿದ ಎಲ್ಲಾ ಮಾಹಿತಿ ವಿವರಿಸಿದ್ದು, ಈ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಾಗುವ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್, ಆಕರ್ಷಕ ನಗದು ಬಹುಮಾನ ಮತ್ತು ವಿದೇಶ ಪ್ರವಾಸ ಹೋಗುವ ಅವಕಾಶಗಳನ್ನು ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಚ್ಚಾಡೊ ಅವರು ತಿಳಿಸಿದ್ದಾರೆ.