ಸೋಮವಾರಪೇಟೆ,ಸೆ.16: ಸಮೀಪದ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 22ರಂದು ಗೌಡಳ್ಳಿ ಬಿಜಿಎಸ್ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ.
ಅಂದು ಪೂರ್ವಾಹ್ನ 11 ಗಂಟೆಗೆ ಸಂಘದ ಅಧ್ಯಕ್ಷ ಎಸ್.ಬಿ. ಭರತ್ಕುಮಾರ್ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೆ. ಶಿವಪ್ರಕಾಶ್ ತಿಳಿಸಿದ್ದಾರೆ.