ಮಡಿಕೇರಿ, ಸೆ.17: ವಿಶ್ವಕರ್ಮ ಸಮಾಜದ ಬಂಧುಗಳು ಮರದ ಕೆತ್ತನೆ, ಚಿನ್ನದ ಕೆಲಸ ಹೀಗೆ ವಿವಿಧ ವೃತ್ತಿಪರ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಶ್ಲಾಘಿಸಿದರು. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಂಗಳವಾರ ನಡೆದ ‘ವಿಶ್ವ ಕರ್ಮ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ ಚಿನ್ನ, ಬೆಳ್ಳಿ ಕೆಲಸದಲ್ಲಿ ತಾಳ್ಮೆ ಹಾಗೂ ಕ್ರಿಯಾಶೀಲತೆ ಕಾಣಬಹುದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸರಸ್ವತಿ ಡಿಇಡಿ ಕಾಲೇಜಿನ ಪ್ರಾಂಶುಪಾಲ ಕುಮಾರ್ ಅವರು ಮಾತನಾಡಿ ಬಡಿಗ, ಕಮ್ಮಾರ, ಶಿಲ್ಪಕಲೆ ಹಾಗೂ ಸ್ವರ್ಣಕಲೆಗಳನ್ನು ಮಾಡುವದು ಸೇರಿದಂತೆ ಪಂಚ ಕಸುಬುಗಳನ್ನು ನಿರ್ವಹಿಸುವವರೇ ವಿಶ್ವಕರ್ಮರು ಎಂದರು.

ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕದ

(ಮೊದಲ ಪುಟದಿಂದ) ಅಧ್ಯಕ್ಷರಾದ ಎಸ್.ಜೆ.ದೇವದಾಸ್ ಅವರು ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತೆ ಮನವಿ ಮಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್ ಸ್ವಾಗತಿಸಿ, ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.