ಗೋಣಿಕೊಪ್ಪಲು, ಸೆ.18: ಭಾರತದ ಪ್ರಧಾನಿ ನರೇಂದ್ರಮೋದಿ ಜನ್ಮದಿನದ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಮಂಡಲ ದಲ್ಲಿಯೂ ಅಕ್ಟೋಬರ್ 2 ರವರೆಗೆ ಸೇವಾ ಸಪ್ತಾಹ ಹಮ್ಮಿಕೊಂಡಿರು ವದಾಗಿ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ ತಿಳಿಸಿದ್ದಾರೆ. ಗೋಣಿಕೊಪ್ಪಲಿ ನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಮೋದಿ ಅವರ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಅಭಿಯಾನವನ್ನು ನಿರಂತರ ವಾಗಿ ಎಲ್ಲ ಮಂಡಲಗಳಲ್ಲಿಯೂ ಹಮ್ಮಿಕೊಳ್ಳಲಾ ಗುವದು. ತಾ.20 ರಂದು ಮಡಿಕೇರಿ ಯಲ್ಲಿ ಮಹಿಳಾ ಮೋರ್ಚಾಸಭೆ ಹಾಗೂ ಪೂರ್ವ ಭಾವಿ ಕಾರ್ಯಕ್ರಮ ಪಟ್ಟಿ ಬಿಡುಗಡೆ ಮಾಡಲಾಗುವದು ಎಂದರು.