ಮಡಿಕೇರಿ, ಸೆ. 21: ಜಾತ್ಯತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡಿ, ಪಕ್ಷ ಸಂಘಟನೆ ಕುರಿತು ಕಾರ್ಯಕರ್ತ ರೊಂದಿಗೆ ಚರ್ಚಿಸಲಿದ್ದಾರೆ ಎಂದು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ತಮ್ಮ ನೇತೃತ್ವದ ಜಿಲ್ಲಾ ಜೆಡಿಎಸ್ ನಿಯೋಗ ಮಾಜಿ ಪ್ರಧಾನಿ ದೇವೇಗೌಡರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪಕ್ಷದೊಳಗಿನ ಗೊಂದಲ ಗಳನ್ನು ನಿವಾರಿಸಿ ಕೊಂಡಿರುವದಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರನ್ನು ಬದಲಾಯಿಸುವದಿಲ್ಲ ಎನ್ನುವ ಭರವಸೆ ರಾಷ್ಟ್ರೀಯ ಅಧ್ಯಕ್ಷರಿಂದ ಬಂದಿದೆ ಎಂದಿದ್ದಾರೆ.ಅಕ್ಟೋಬರ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸ ಲಿರುವ ದೇವೇಗೌಡರು ಜಿಲ್ಲಾಧ್ಯಕ್ಷ ಗಣೇಶ್ ಅವರಿಗೆ ಸಹಕಾರ ನೀಡು ವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಿದ್ದಾರೆ. ಸದÀ್ಯದಲ್ಲಿಯೇ ಮಧ್ಯಂತರ ಚುನಾವಣೆ ಬರಬಹು ದೆಂದು
(ಮೊದಲ ಪುಟದಿಂದ) ನಿರೀಕ್ಷಿಸಿರುವ ದೇವೇಗೌಡರು ಪಕ್ಷ ಸಂಘಟನೆಗೆ ಒಲವು ತೋರಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೆ.ಎಂ.ಗಣೇಶ್ ಅವರು ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೊಳಿಸುವ ಚತುರತೆಯನ್ನು ಹೊಂದಿದ್ದಾರೆ ಎನ್ನುವ ವಿಶ್ವಾಸ ದೇವೇಗೌಡರಿಗಿದೆ. ಇದೇ ಕಾರಣದಿಂದ ಗಣೇಶ್ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುವದಿಲ್ಲವೆಂದು ಭರವಸೆ ನೀಡಿರುವದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಕೊಡಗು ಜೆಡಿಎಸ್ ನಿಯೋಗದೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಗೌಡರು ಈ ಹಿಂದೆ ಜಿಲ್ಲಾಧ್ಯಕ್ಷ ಸ್ಥಾನದ ಕುರಿತು ಎರಡು ಗುಂಪುಗಳ ನಡುವೆ ನಡೆದ ಮಾತಿನ ಚಕಮಕಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು ಎಂದು ತಿಳಿಸಿರುವ ಸಂಕೇತ್ ಪೂವಯ್ಯ, ಗಣೇಶ್ ಅವರೇ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಾದೇಶಿಕ ಪಕ್ಷಕ್ಕೆ ರಾಜ್ಯದಲ್ಲಿ ಉತ್ತಮ ಭವಿಷ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇವೇಗೌಡರನ್ನು ಭೇಟಿಯಾದ ನಿಯೋಗದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್, ಖಜಾಂಚಿ ಡೆನ್ನಿ ಬರೋಸ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಸುನೀಲ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ಖಾನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ. ಶಾಂತಿ ಅಚ್ಚಪ್ಪ, ತಾಲೂಕು ಅಧ್ಯಕ್ಷೆ ಪಿ. ಕುಸುಮಾವತಿ ಮತ್ತಿತರರು ಹಾಜರಿದ್ದರು.