ಸೋಮವಾರಪೇಟೆ, ಸೆ. 21: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಪಟ್ಟಣದ ಪಾನ್‍ಶಾಪ್, ಹೊಟೇಲ್, ಕಿರಾಣಿ ಅಂಗಡಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರಲ್ಲದೆ, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವದನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಂಡರು.

ಕಾನೂನು ಉಲ್ಲಂಘಿಸಿದ ಅಂಗಡಿ ಮಾಲೀಕರಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು. ಕೆಲವರಿಗೆ ನೋಟೀಸ್ ನೀಡಲಾಯಿತು. ಶಿಕ್ಷಣ ಸಂಸ್ಥೆಗಳ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಪ್ಯಾಕುಗಳ ಮೇಲೆ ಶೇ 85 ನಷ್ಟು ಆರೋಗ್ಯದ ಎಚ್ಚರಿಕೆ ಸಂದೇಶಗಳಿಲ್ಲದೆ ಪ್ಯಾಕ್‍ಗಳನ್ನು ಮಾರಾಟ ಮಾಡಬಾರದು ಎಂದು ತಿಳುವಳಿಕೆ ನೀಡಿದರು.

ಈ ಸಂದರ್ಭ ಎಂಟೋಮಾಲಜಿಸ್ಟ್ ಮಂಜುನಾಥ್, ಹೆಲ್ತ್ ಇನ್ಸ್‍ಪೆಕ್ಟರ್ ಮಹೇಶ್, ಜಿಲ್ಲಾ ಸಲಹೆಗಾರ್ತಿ ಪುನೀತ ರಾಣಿ, ಮಂಜುನಾಥ್ ಮತ್ತು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.