ಮಡಿಕೇರಿ, ಸೆ. 21: ಪ್ರಸಕ್ತ (2019-20) ಸಾಲಿಗೆ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ರೂ. 10 ಸಾವಿರದಂತೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ ಮಂಜೂರು ಮಾಡಲು ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯ ಕುಟುಂಬದ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ. 4.50 ಲಕ್ಷಗಳು, 2(ಎ), 3(ಎ), 3(ಬಿ) ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ರೂ.3.50 ಲಕ್ಷ. ಆನ್‍ಲೈನ್ ಮೂಲಕ ಅರ್ಜಿಯನ್ನು ತಾ. 30 ರಂದು 5 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ನೋಡುವದು. ದೂರವಾಣಿ ಸಂಖ್ಯೆ 8050770004ನ್ನು, ಹಿಂದುಳಿದ ವರ್ಗಗಳ ಕಲ್ಯಾಣ ಇಲ್ಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08272-225628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ. ಶಿವಕುಮಾರ್ ತಿಳಿಸಿದ್ದಾರೆ.