ಸೋಮವಾರಪೇಟೆ, ಸೆ. 21: ಯಡವಾರೆ ಗ್ರಾಮದ ಶ್ರೀ ಚನ್ನಿಗರಾಯ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ ಮಂಜೂರಾದ ಐದು ಲಕ್ಷ ರೂ.ಗಳ ಚೆಕ್ ಅನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಮ್ಮ ಕಚೇರಿಯಲ್ಲಿ, ದೇವಾಲಯ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ದೇವಾಲಯ ಸಮಿತಿ ಅಧ್ಯಕ್ಷ ಬಾರನ ಅಪ್ಪಾಜಿ, ಕಾರ್ಯದರ್ಶಿ ಪ್ರಕಾಶ್, ಖಜಾಂಜಿ ಬಾರನ ಭರತ್ ಮುಂತಾದವರು ಹಾಜರಿದ್ದರು.