ಮಡಿಕೇರಿ, ಸೆ. 21: ತಾನು ವಾಸವಿದ್ದ ಲೈನ್‍ಮನೆ ಪಕ್ಕದಲ್ಲಿ ಗಾಂಜಾ ಗಿಡ ಬೆಳೆಸಿದ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಲೈನ್‍ಮನೆಯಲ್ಲಿ ವಾಸವಿದ್ದ ಮೋಹನ್‍ದಾಸ್ ಆರೋಪಿ. ತಾನು ವಾಸಿಸುತ್ತಿದ್ದ ಲೈನ್‍ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮನೆಯ ಬಳಿ ಪರಿಶೀಲನೆ ನಡೆಸಿದ ಸಂದರ್ಭ ಅಕ್ರಮವಾಗಿ 8 ಗಾಂಜಾ ಗಿಡ ಬೆಳೆದಿರುವದು ಪತ್ತೆಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ನಿರ್ದೇಶನದಂತೆ ಪೊಲೀಸ್ ಉಪಾಧೀಕ್ಷಕ ಮುರಳೀಧರ್ ಮಾರ್ಗದರ್ಶನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮತ್ತಿತರ ಸಿಬ್ಬಂದಿ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿತು.