ಮಡಿಕೇರಿ, ಸೆ. 23 : ಗ್ರಾಮೋತ್ಥಾನ ಭಾರತ ಪ್ರಕಾಶನ ಹೊರತಂದಿರುವ ಪತ್ರಕರ್ತ ಚಿ.ನಾ. ಸೋಮೇಶ್ ಅವರು ಬರೆದಿರುವ ‘ಆಂಜಮುತ್ತ್’ ಕೊಡವ ಭಾಷೆ ಕೃತಿ ಬಿಡುಗಡೆ ಕಾರ್ಯಕ್ರಮವು ತಾ. 24 ರಂದು ಬೆಳಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಪತ್ರಕರ್ತರ ಸಂಘ, ಕೊಡಗು ಪ್ರೆಸ್‍ಕ್ಲಬ್ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ, ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್, ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.