ಮಡಿಕೇರಿ, ಸೆ. 22: ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ತರಗತಿ ಕೊಠಡಿಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅಪ್ಪಚ್ಚು ರಂಜನ್ ಅವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವಲ್ಲಿ ಶಿಕ್ಷಕರ ಪಾತ್ರ ಹೆಚ್ಚಿನದ್ದಾಗಿದೆ. ಮಕ್ಕಳು ಉತ್ತಮ ಜ್ಞಾನವನ್ನು ಪಡೆದುಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯರಾದ ಅಪ್ರುರವೀಂದ್ರ, ಕಡಗದಾಳು ಗ್ರಾ.ಪಂ. ಉಪಾಧ್ಯಕ್ಷ ಮಾದೇಟಿರ ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ, ಕಡಗದಾಳು ಸ.ಹಿ.ಪ್ರಾ.ಶಾಲೆ ಎಸ್ಡಿಎಂಸಿ ಅಧ್ಯಕ್ಷ ಹೆಚ್.ಎಂ. ಲಕ್ಷ್ಮಣ ಹಾಗೂ ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.
ಶಾಲಾ ಮಕ್ಕಳು ನಾಡಗೀತೆಯನ್ನು ಹಾಡಿದರು. ಲೀಲಾವತಿ ಸ್ವಾಗತಿಸಿ, ಜಲಜಾ ವಂದಿಸಿದರು.