ಮಡಿಕೇರಿ, ಸೆ. 23: ದೇಶದೆಲ್ಲೆಡೆ “ಸಂವಿಧಾನ ದಿವಸ”ವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, “ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು” ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ನೆಹರು ಯುವ ಕೇಂದ್ರಕ್ಕೆ ನೀಡಿದೆ. ಭಾಷಣ ಸ್ಪರ್ಧೆಯು ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಇರಲಿದ್ದು, ಭಾಷಣದ ಅವಧಿ 10 ನಿಮಿಷ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವದು.
ಮಡಿಕೇರಿ ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆ ತಾ.25ರಂದು ಬೆಳಗ್ಗೆ 10.30 ಗಂಟೆಗೆ ಅರ್ಥಶಾಸ್ತ್ರ ವಿಭಾಗ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಡೆಸಲಿದ್ದು, ಇಲ್ಲಿಂದ ಆಯ್ಕೆಗೊಂಡ ಮೂರು ಯುವಜನರು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗುತ್ತದೆ. ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಆಯ್ಕೆಯಾದವರು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕು. ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಆಯ್ಕೆಯಾದವರು ರಾಷ್ಟ್ರಮಟ್ಟದಲ್ಲಿ ಭಾಗವಹಿಸಬೇಕಾಗುತ್ತದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ಆಯಾ ತಾಲೂಕಿನ ಆಸಕ್ತ 18-29 ವಯೋಮಿತಿಯ ಯುವಜನರು ಹೆಚ್ಚಿನ ಮಾಹಿತಿಗಾಗಿ ಪ್ರೊ. ದಯಾನಂದ್ - 9449766772, ಸಂತೋಷ್ ಕುಮಾರ್ ಹೆಚ್.ಬಿ. -8762306475, ಮಿಥುನ್ ಎಂ.ಬಿ. - 9900396997 ಇವರನ್ನು ಸಂಪರ್ಕಿಸಬಹುದಾಗಿದೆ.