ಸಿದ್ದಾಪುರ, ಸೆ. 22: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಸೂರು ಒದಗಿಸಿಕೊಡಬೇಕೆಂದು ಸಿಪಿಐಎಂ ಪಕ್ಷದ ಮುಖಂಡ ಪಿ.ಆರ್. ಭರತ್ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಲಿಹುದಿಕೇರಿ ಗ್ರಾಮದ ನದಿ ತೀರದ ಮನೆಗಳು ಈ ಬಾರಿಯ ಪ್ರವಾಹಕ್ಕೆ ಸಿಲುಕಿ ಕುಸಿದಿರುತ್ತದೆ. ಅಲ್ಲದೆ ನೂರಾರು ಮನೆಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆ ನದಿ ತೀರದ ನಿವಾಸಿಗಳು ಇದೀಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಮನೆ ಕಳೆದುಕೊಂಡ ಸಂತ್ರಸ್ತರು ಸ್ಥಳೀಯ ಪ್ರಾಥಮಿಕ ಶಾಲೆಯ ಪರಿಹಾರ ಕೇಂದ್ರದಲ್ಲಿದ್ದು, ಸಂತ್ರಸ್ತರಿಗೆ ಶಾಶ್ವತ ಸೂರು ಸಿಗದೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಡಳಿತ ಕೂಡಲೇ ಸರ್ಕಾರಿ ಭೂಮಿಯನ್ನು ಗುರುತಿಸಿ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಸಿಪಿಐಎಂ ಪಕ್ಷದ ಪ್ರಮುಖರಾದ ರವಿ ಹಾಗೂ ಚಂದ್ರನ್ ಹಾಜರಿದ್ದರು.