ಗೋಣಿಕೊಪ್ಪ ವರದಿ, ಸೆ. 22: ಇಲ್ಲಿನ ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಅಪರಿಚಿತ ಪುರುಷ ವ್ಯಕ್ತಿಯ ಶವ ಪತ್ತೆಯಾಗಿದ್ದು, 60 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮೃತ ದೇಹದ ಎದೆಯ ಭಾಗದಲ್ಲಿ ಕಪ್ಪು ಮಚ್ಚೆ ಇದೆ. ಹಳದಿ, ನೀಲಿ ಬಣ್ಣದ ಶರಟು, ನೀಲಿ ಬಣ್ಣದ ಪಂಚೆ ತೊಟ್ಟಿದ್ದು, ಮೃತದೇಹವನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇಡಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಿಸುದಾರರಿದ್ದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಯನ್ನು 08274 247333 ಸಂಪರ್ಕಿಸಬಹುದಾಗಿದೆ.