ವೀರಾಜಪೇಟೆ, ಸೆ.24: ವೀರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ಪದವಿ ಕಾಲೇಜಿನಲ್ಲಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ “ಭಾರತದ ಆರ್ಥಿಕತೆಯ ಪ್ರಸ್ತುತದ ಚಿತ್ರಣ” ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ತಾ. 24 ರಂದು (ಇಂದು) ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಈ ಉಪನ್ಯಾಸ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಹರೀಶ್ ಕೆ.ಜಿ. ಪಾಲ್ಗೊಳ್ಳಲ್ಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ರೋನಿ ರವಿಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.