ಸುಂಟಿಕೊಪ್ಪ, ಸೆ. 22: ಮಾದಾಪುರ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ. 23 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಬಿ.ಎ. ಮೊಣ್ಣಪ್ಪ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್. ಕಾವೇರಪ್ಪ ತಿಳಿಸಿದ್ದಾರೆ.