ಮಡಿಕೇರಿ, ಸೆ. 23: ಇಲ್ಲಿನ ಸರ್ವೋದಯ ಸಮಿತಿ ವತಿಯಿಂದ ಗಾಂಧೀಜಿ ವಿಚಾರಧಾರೆಯ ಕುರಿತು ವಿದ್ಯಾರ್ಥಿಗಳಿಗೆ-ಶಿಕ್ಷಕರುಗಳಿಗೆ ತಾ. 24 ರಂದು (ಇಂದು) ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮವನ್ನು ಪೌರಾಯುಕ್ತ ಎಂ.ಎಲ್. ರಮೇಶ್ ಉದ್ಘಾಟಿಸುವರು. ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ. ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಪಿ.ಎಸ್. ಮಚ್ಚಾಡೊ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ. ಬೇಬಿಮ್ಯಾಥ್ಯೂ ಉಪಸ್ಥಿತರಿರುವರು.