ಕೂಡಿಗೆ, ಸೆ. 22: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿರುವ ಕಾಮಧೇನು ಸಾವಯವ ಕೃಷಿ ಸಂಘದ ವತಿಯಿಂದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ಸಾವಯವ ಭಾಗ್ಯ ಯೋಜನೆಯ ಅಡಿಯಲ್ಲಿ ಕಳೆದ 5 ವರ್ಷಗಳಿಂದ ಈ ಗ್ರಾಮದಲ್ಲಿ ಸಾವಯವ ಕೃಷಿ ಬಗ್ಗೆ ಹೆಚ್ಚು ಪ್ರಗತಿ ಸಾಧಿಸಿದೆ. ಈ ಹಿನ್ನೆಲೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಾವಯವ ಒಕ್ಕೂಟದ ನಿರ್ದೇಶಕ ಕಪನಪ್ಪ ವಹಿಸಿದ್ದರು. ತಾಲೂಕು ಕೃಷಿ ಸಹಾಯಕ ನಿರ್ದೇಶಕ ರಾಜಶೇಖರ, ಕುಶಾಲನಗರ ರೈತ ಸಂಪರ್ಕ ಕೇಂದ್ರ ಅಧಿಕಾರಿ ಪೂಣಚ್ಚ, ಸಾವಯವ ಕೃಷಿ ಅಧಿಕಾರಿ ಸತೀಶ್, ಪುಟ್ಟಸ್ವಾಮಿ. ಕಪನಪ್ಪ, ಹೇಮಂತ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಗ್ರಾಮದ ಪ್ರಮುಖರಾದ ಚಂದ್ರಪ್ಪ, ರಾಮಣ್ಣ, ಸೇರಿದಂತೆ ಇತರರು ಹಾಜರಿದ್ದರು.