ಮಡಿಕೇರಿ, ಸೆ.14: ಗಾಳಿಬೀಡು ಜವಾಹರ ನವೋದಯ ವಿದ್ಯಾಲಯಕ್ಕೆ 2020-21 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಮಾನ್ಯತೆ ಪಡೆದ ಯಾವದೇ ಶಾಲೆಯ 5 ನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ಮಕ್ಕಳು ಈ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ.15 ಕೊನೆಯ ದಿನವಾಗಿದೆ. ಪರೀಕ್ಷೆಯು 2020ರ ಜನವರಿ 11 ರಂದು ನಡೆಯಲಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಕೋರಿದ್ದಾರೆ.