ಮಡಿಕೇರಿ, ಸೆ. 22: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ತಾ. 24 ರಂದು (ನಾಳೆ) ಶಿಕ್ಷಕರ ದಿನಾಚರಣೆ ಆಯೋಜಿಸಲಾಗಿದೆ.

ಈ ವರ್ಷ ಅತ್ಯುತ್ತಮ ಶಿಕ್ಷಕರಾಗಿ ರಾಷ್ಟ್ರಪ್ರಶಸ್ತಿ ಪಡೆದ ಕರ್ನಾಟಕದ ಈರ್ವರು ಶಿಕ್ಷಕರ ಪೈಕಿ ಕೊಡಗಿನವರಾದ ಬೆಸೂರಿನ ಸುರೇಶ್ ಮರಕಾಲ, ಹಾಗೂ ಮೂರ್ನಾಡಿನ ಶಿಕ್ಷಕ ಎಸ್.ಡಿ. ಪ್ರಶಾಂತ್ ಅವರನ್ನು ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಸಕ ಕೆ.ಜಿ. ಬೋಪಯ್ಯ ಸನ್ಮಾನಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರೋಟರಿ ವಲಯ ಕಾರ್ಯದರ್ಶಿ ಅನಿಲ್ ಎಚ್.ಟಿ. ಜೋವಲ್ ಲೆಫ್ಟಿನಂಟ್ ಕೇಶವಪ್ರಸಾದ್ ಮುಳಿಯ, ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಪ್ರಮೋದ್ ಕುಮಾರ್ ರೈ ಪಾಲ್ಗೊಳ್ಳಲಿದ್ದಾರೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ಎಂ.ಆರ್. ಜಗದೀಶ್ ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.